ಮೈಸೂರು : ವಿಧಾನಸಭೆ ಚುನಾವಣೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಹಲವು ಕಸರತ್ತು ಮಾಡುತ್ತಿದ್ದಾರೆ.
ಇದೀಗ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನನಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ಕನ್ಪರ್ಮ್ ಎಂದಿದ್ದಾರೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ರಾಜ್ಯದ 6 ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಜಮಖಂಡಿ, ತೇರದಾಳ, ಧಾರವಾಡ ನಗರ, ಶೃಂಗೇರಿ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮಸೇನೆಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ. ಕಾರ್ಕಳ ಅತವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮುತಾಲಿಕ್ ಇತ್ತೀಚೆಗೆ ಹೇಳಿದ್ದರು.
ಕೊರೊನಾ ಭೀತಿ : 3 ನೇ ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ನಿಗಾ : ಸಚಿವ ಸುಧಾಕರ್