ಹರಿಯಾಣ: ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ ಏಳು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಮಹಿಳೆಯರು, ಚಾಲಕ ಸೇರಿ 2 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.
ಸಂತ್ರಸ್ತರು ಸಿರ್ಸಾದ ಖರಿಯನ್ ಹಳ್ಳಿಯಲ್ಲಿರುವ ಡೇರಾ ಬಾಬಾ ಮುಂಗಾನಾಥ್ಗೆ ಭೇಟಿ ನೀಡಿದ ನಂತರ ಮೆಹ್ನಾ ಖೇರಾಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳು ಸಹ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್ ಇನ್ಸ್ಪೆಕ್ಟರ್ ಕಿಶೋರಿ ಲಾಲ್ ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದೆ.
BIG NEWS : ಜ್ಞಾನಯೋಗಾಶ್ರಮದ ʻಸಿದ್ಧೇಶ್ವರ ಸ್ವಾಮೀಜಿʼ ಲಿಂಗೈಕ್ಯ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
BIG NEWS : ಜ್ಞಾನಯೋಗಾಶ್ರಮದ ʻಸಿದ್ಧೇಶ್ವರ ಸ್ವಾಮೀಜಿʼ ಲಿಂಗೈಕ್ಯ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ