ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.
ಅಕ್ಕಿಯ ಅಲಭ್ಯತೆಯಿಂದಾಗಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ರೂ.170/- ರಂತೆ ಹಣವನ್ನು ವರ್ಗಾಯಿಸಿರುತ್ತಾರೆ ಎಂದು ಹೇಳಿದ್ದಾರೆ.
ಮೇಲೆ ಓದಲಾದ (2)ರ ಆಯುಕ್ತರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರು ಪ್ರಸ್ತಾವನೆ ಸಲ್ಲಿಸಿ, ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ದಿನಾಂಕ:17.01.2025ರ ಪತ್ರದಲ್ಲಿ ಭಾರತ ಆಹಾರ ನಿಗಮದ OMSS(D) ಯೋಜನೆಯಡಿ ರಾಜ್ಯಗಳಿಗೆ ಮಾರಾಟ ಮಾಡಲಾಗುವ ಅಕ್ಕಿ ದರವನ್ನು ಪ್ರತಿ ಕ್ವಿಂಟಾಲ್‌ಗೆ ರೂ.2250/- ರಂತೆ (ಸಾಗಾಣಿಕೆ ದರ ಸೇರಿದಂತೆ) ಇ-ಹರಾಜು ಹೊರತುಪಡಿಸಿ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ಕಲ್ಪಿಸಿ ಸದರಿ ದರ ದಿನಾಂಕ:30.06.2025ರ ವರೆಗೆ ಅನ್ವಯಿಸುವುದಾಗಿ ತಿಳಿಸಿ, ವಾರ್ಷಿಕ ಒಟ್ಟು 12 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಖರೀದಿಸಲು ಮಿತಿಯನ್ನು ನಿಗದಿಪಡಿಸಿರುತ್ತಾರೆ ಎಂದಿದ್ದಾರೆ.
ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ಫಲಾನುಭವಿಗೆ 05 ಕೆ.ಜಿ ಭಾರತ ಆಹಾರ ನಿಗಮದ ಓಎಂಎಸ್‌ಎಸ್(ಡಿ) ಅಕ್ಕಿಯನ್ನು ಹಂಚಿಕೆಗೆ ಪರಿಗಣಿಸಿದಲ್ಲಿ ಮಾಸಿಕವಾಗಿ ಅಂದಾಜು 2.10 ಲಕ್ಷ ಮೆ.ಟನ್ ಅಕಿ ಅಗತ್ಯವಿದ್ದು, ಸದರಿ ಪ್ರಮಾಣಕ್ಕೆ ಖರೀದಿ ದರ, ಸಗಟು/ಚಿಲ್ಲರೆ ಸಾಗಾಣಿಕೆ ವೆಚ್ಚ ಹಾಗೂ ಸಗಟು ಚಿಲ್ಲರೆ ಸಗಟು ಲಾಭಾಂಶ ಸೇರಿದಂತೆ ಮಾಸಿಕ ಅಂದಾಜು ವೆಚ್ಚ ರೂ.536.71 ಕೋಟಿಗಳ ವೆಚ್ಚ ಆಗುವುದಾಗಿ ಪ್ರಸ್ತಾಪಿಸಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.
ಆಯುಕ್ತರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಭಾರತ ಆಹಾರ ನಿಗಮದ ಹೊಸ ಓಎಂಎಸ್‌ಎಸ್(ಡಿ) ಯೋಜನೆಯಡಿ ಜನವರಿ- 2025ರ ಮಾಹೆಯಿಂದ ಜಾರಿಗೆ ಬರುವಂತೆ ಅಕ್ಕಿಯ ಪರಿಷ್ಕೃತ ದರ ಪ್ರತಿ ಕೆ.ಜಿ ಅಕ್ಕಿಗೆ ರೂ.22.50 ರಂತ ನಿಗಧಿಪಡಿಸಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ನೀಡಲಾಗುತ್ತಿರುವ ನೇರ ನಗದು ವರ್ಗಾವಣೆ (DBT) ಬದಲಾಗಿ ಪ್ರತಿ ಫಲಾನುಭವಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಪಡಿತರ ಚೀಟಿಗಳ (PHH) ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ ಆನಾಸ 84 ಡಿಆರ್‌ಎ 2023, ದಿನಾಂಕ: 06.07.2023 ರ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಿದೆ.
ಅನ್ನಭಾಗ್ಯ ಯೋಜನೆಯನ್ನು (ಗ್ರಾರಂಟಿ) ಅನುಷ್ಠಾನಗೊಳಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಸದರಿ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ FD 111 Exp-5/2025, ದಿನಾಂಕ:18.02.2025, ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.