ಟೆಹರಾನ್: ಇರಾನ್ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಐವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ಎಂದು ಅಪರಿಚಿತ ಅಧಿಕಾರಿಯನ್ನು ಉಲ್ಲೇಖಿಸಿ ರಾಜ್ಯ ಮಾಧ್ಯಮ ಬುಧವಾರ ತಿಳಿಸಿದೆ.
ಎರಡು ಮೋಟರ್ಸೈಕಲ್ಗಳಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ಇಝೆಹ್ ನಗರದ ಕೇಂದ್ರ ಮಾರುಕಟ್ಟೆಗೆ ಆಗಮಿಸಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಈ ವೇಳೆ ಐವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಮಹಿಳೆಯರ ಇರಾನ್ನ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ನೈತಿಕತೆಯ ಪೋಲೀಸರಿಂದ ಬಂಧಿಸಲ್ಪಟ್ಟ ಮೂರು ದಿನಗಳ ನಂತರ, ಸೆಪ್ಟೆಂಬರ್ 16 ರಂದು ಮಹ್ಸಾ ಅಮಿನಿಯ ಸಾವನ್ನಪ್ಪಿದರು. ಈ ಘಟನೆಯಿಂದ ಆಕ್ರೋಶಗೊಂಡ ಇರಾನ್ ಜನತೆ ಪ್ರತಿಭಟನೆಗೆ ಇಳಿದಿದೆ. ಪ್ರತಿಭಟನೆ ಪ್ರಾರಂಭವಾದಾಗಿನಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.
‘ತಾಕತ್ತು’ ಇದ್ದರೆ ಎಲ್ಲೋ ಒಂದು ಕಡೆ ನಿಂತು ಗೆದ್ದು ತೋರಿಸಿ : ಟ್ವಿಟರ್ ನಲ್ಲಿ ಸಿದ್ದರಾಮಯ್ಯಗೆ ಬಿಜೆಪಿ ಸವಾಲ್
‘ತಾಕತ್ತು’ ಇದ್ದರೆ ಎಲ್ಲೋ ಒಂದು ಕಡೆ ನಿಂತು ಗೆದ್ದು ತೋರಿಸಿ : ಟ್ವಿಟರ್ ನಲ್ಲಿ ಸಿದ್ದರಾಮಯ್ಯಗೆ ಬಿಜೆಪಿ ಸವಾಲ್