ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಥಮ ಅವರು ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ ನಿರಂಜನ್ ಹಿರೇಮಠ ಹಾಗೂ ನೇಹಾಳ ತಾಯಿ ಅವರನ್ನು ಭೇಟಿಯಾಗಿ ಅವರನ್ನು ಸಂತೈಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ಎಂದು ಪ್ರಶ್ನಿಸಿದ್ದಾರೆ.
ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ ಎಂದು ನಟ ಪ್ರಥಮ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ. ನೇಹಾ ಹಿರೇಮಠ್ ನಿಧನದಿಂದ ಚಿತ್ರರಂಗದ ಎಲ್ಲರಿಗೂ ನೋವಾಗಿದೆ. ಪ್ರಹ್ಲಾದ್ ಜೋಶಿ ಅವರೇ ನೀವು 10 ವರ್ಷದಿಂದ ಅಧಿಕಾರದಲ್ಲಿ ಇದ್ದೀರಿ. ಅಂತರ್ ಧರ್ಮೀಯ ವಿವಾಹದ ಬಗ್ಗೆ ಕಠಿಣ ನಿಯಮ ತೆಗೆದುಕೊಂಡು ಬನ್ನಿ ಎಂದು ಪ್ರಥಮ್ ಹೇಳಿದ್ದಾರೆ.