ಗದಗ : ಕಳಸಾ-ಬಂಡೂರಿ ನಾಲಾ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರಿಗೆ ಮಾಹಿತಿ ನೀಡಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೊಬರದಮಠ, ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿ.16ರಂದು ಪತ್ರ ಬರೆದಿದ್ದೆ. ಅದಕ್ಕೆ ಪ್ರಧಾನಿಗಳ ಕಾರ್ಯಾಲಯ ಸ್ಪಂದಿಸಿದೆ ಎಂದು ಅವರು ತಿಳಿಸಿದರು.
ಅವರು ನನಗೆ ಪತ್ರ ಬರೆದಿದ್ದು, ಈ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ಈ ಪ್ರದೇಶವನ್ನು ವೀಕ್ಷಣೆ ಮಾಡಿ ಸರ್ಕಾರಕ್ಕೆ ವರದಿ ಕೊಡುತ್ತದೆ ಎಂದು ತಿಳಿಸಿದ್ದಾರೆ. ಸಮಿತಿ ಆಗಮಿಸಿದ ಸಂದರ್ಭದಲ್ಲಿ ಕುಡಿಯುವನೀರಿನಯೋಜನೆಗೆ ಅನುಮತಿನೀಡಬೇಕೆಂದು ಮನವಿ ಮಾಡುತ್ತೇನೆ ಎಂದರು.