ನವದೆಹಲಿ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇಲ್ಲಿನ ಪಾಂಡೋರಿ ಗೋಲಾ ಗ್ರಾಮದಲ್ಲಿ ಮುಂಜಾನೆ 4:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಕಟ್ಟಡವು ಶಿಥಿಲಾವಸ್ಥೆಯಲ್ಲಿತ್ತು. ಕೆಲವು ತ್ಯಾಜ್ಯ ವಸ್ತುಗಳನ್ನು ಮನೆಯ ಛಾವಣಿಯಲ್ಲಿ ಇರಿಸಲಾಗಿತ್ತು ಮತ್ತು ಅದರ ತೂಕದಿಂದಾಗಿ ಛಾವಣಿ ಕುಸಿದಿದೆ.
ಘಟನೆಯ ನಂತರ, ನೆರೆಹೊರೆಯವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಮೃತರನ್ನು ಗೋವಿಂದ (40), ಪತ್ನಿ ಅಮರ್ಜಿತ್ ಕೌರ್ (36), ಅವರ ಮೂವರು ಅಪ್ರಾಪ್ತ ಮಕ್ಕಳಾದ ಗುರ್ಬಜ್ ಸಿಂಗ್ (14), ಗುರ್ಲಾಲ್ (17), ಮಗಳು ಏಕಮ್ (15) ಎಂದು ಗುರುತಿಸಲಾಗಿದೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ