ಬೆಂಗಳೂರು: ಪರಿಶಿಷ್ಟ ಜಾತಿ/ಮೂಲ ಜಾತಿ ಸಮಗ್ರ ಸಮೀಕ್ಷೆಗಾಗಿ ಗೌರವಾನ್ವಿತ ನೀವೃತ್ತಿ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್ ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯತ್ವ ಆಯೋಗವನ್ನು ರಚಿಸಲಾಗಿರುತ್ತದೆ.
ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸಲು ಗಣತಿದಾರರು ಪ್ರತಿದಿನವೂ ತಪ್ಪದೇ Mobile App ನಲ್ಲಿ Login ಆಗಿ ಕಡ್ಡಾಯವಾಗಿ ತಮಗೆ ನಿಗಧಿಪಡಿಸಲಾದ ಸಮೀಕ್ಷಾ ಬ್ಲಾಕ್ ನಲ್ಲಿರುವ ಎಲ್ಲಾ ಮನೆಗಳಿಗೂ ತಪ್ಪದೇ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲು ನಿರ್ದೇಶನ ನೀಡಲಾಗಿರುತ್ತದೆ.
ಈ ಸಂಬಂಧ ಗೌರವಾನ್ವಿತ ನ್ಯಾಯಮೂರ್ತಿ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ವತಿಯಿಂದ ಕೈಗೊಳ್ಳುತ್ತಿರುವ ಪರಿಶಿಷ್ಟ ಜಾತಿ / ಮೂಲ ಜಾತಿ ಸಮಗ್ರ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ, ನಿಗಧಿತ ಸಮಯಕ್ಕೆ ಸಮೀಕ್ಷೆಯ ಬಗ್ಗೆ ಮಾಹಿತಿ ಸಂಗ್ರಹಿಸದೇ ಯಾವುದೇ ರೀತಿ ಪ್ರಗತಿ ಸಾಧಿಸದೇ 5 ನೌಕರರುಗಳು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಆದೇಶಿಸಲಾಗಿರುತ್ತದೆ.
BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ