ರಾಜಸ್ತಾನ : ರಾಜಸ್ಥಾನದಲ್ಲಿ ಮನಕಲಕುವ ಘಟನೆ ನಡೆದಿದ್ದು, 32 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 5 ವರ್ಷದ ಬಾಲಕ ಮೃತಪಟ್ಟಿದ್ದಾನೆ.ಮೃತ ಬಾಲಕನನ್ನು ಪ್ರಲ್ಹಾದ್ ಹೋಗಿ ಅಂತ ಗುರುತಿಸಲಾಗಿದೆ.
ಹೌದು ರಾಜಸ್ಥಾನದ ಝಾಲಾವರ್ ಜಿಲ್ಲೆಯ ಕೃಷಿ ಜಮೀನಿನಲ್ಲಿ ಭಾನುವಾರ 5 ವರ್ಷದ ಬಾಲಕ 32 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ, ಕೂಡಲೇ ಅಧಿಕಾರಿಗಳ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. NDRF ಹಾಗೂ SDRF ನ ನಿರಂತರ 14 ಗಂಟೆಗಳ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕ ಸಾವನಪ್ಪಿದ್ದಾನೆ.
ಪೊಲೀಸರ ಪ್ರಕಾರ, ಮಧ್ಯಾಹ್ನ 1.15 ರ ಸುಮಾರಿಗೆ ಪ್ರಹ್ಲಾದ್ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.ಪೋಷಕರು ಹೊಲದ ಇನ್ನೊಂದು ಬದಿಯಲ್ಲಿ ಕೆಲವು ಕೆಲಸಗಳಲ್ಲಿ ನಿರತರಾಗಿದ್ದಾಗ ಅವನು ಬೋರ್ವೆಲ್ ಬಳಿಯ ಕಲ್ಲಿನ ಚಪ್ಪಡಿ ಮೇಲೆ ಕುಳಿತು ಅದರಲ್ಲಿ ಜಾರಿ ಬಿದ್ದಿದ್ದಾನೆ ಎಂದು ವರದಿಯಾಗಿದೆ.