BREAKING: ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಬಲಿ | Dengue Case

ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಕುರುಗೋಡು ತಾಲ್ಲೂಕಿನಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸಿದ್ದಮ್ಮನಹಳ್ಳಿಯ 5 ವರ್ಷದ ಬಾಲಕ ಪ್ರದೀಪ್ ಆಚಾರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಪುಟಾಣಿ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸಿದ್ದಮ್ಮನಹಳ್ಳಿ ಗ್ರಾಮದ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬಳ್ಳಾರಿಯ ವಿಮ್ಸ್, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ … Continue reading BREAKING: ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಬಲಿ | Dengue Case