ನವದೆಹಲಿ : ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಅಮಾವೀಯ ಘಟನೆ ಉತ್ತರ ದೆಹಲಿ ಪ್ರದೇಶದಲ್ಲಿ ಬುಧವಾರ ನಡೆದಿದೆ.
ದೆಹಲಿಯ ಭಾಲ್ಸ್ವಾ ಡೈರಿಯಲ್ಲಿರುವ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ವ್ಯಕ್ತಿಯೊಬ್ಬ ಬಾಲಕಿಯನ್ನು ಅಪಹರಿಸಿದ್ದಾನೆ. ಮಗುವನ್ನು ಅಪಹರಣ ಮಾಡಿರುವ ದೃಶ್ಯ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ನಡೆದ ಮರುದಿನ ಬೆಳಿಗ್ಗೆ ಪ್ರದೇಶದ ಉದ್ಯಾನವನದ ಬಳಿ ಐದು ವರ್ಷದ ಮಗು ಪತ್ತೆಯಾಗಿತ್ತು. ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಮಗುವಿನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದರು.
ಸದ್ಯ ಆರೋಪಿ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ಬುಧವಾರ ರಾತ್ರಿಯಾದರೂ ಮಗು ಮನೆಗೆ ಬಾರದಿದ್ದಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಪೊಲೀಸರು ಮಗುವನ್ನು ಪತ್ತೆಹಚ್ಚಲು ಮೂರು ತಂಡಗಳನ್ನು ರಚಿಸಿದ್ದರು ಎನ್ನಲಾಗುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಪೊಲೀಸರಿಂದ ವರದಿ ಕೇಳಿದೆ.
BIGG NEWS: ಸ್ನೇಹಿತರ ಜೊತೆ ಕಿರಿಕ್; ಮೊಹಮ್ಮದ್ ನಲಪಾಡ್ ವಿರುದ್ದ ದೂರು ದಾಖಲು
IPL Auction 2023 Live: 13.25 ಕೋಟಿ ರೂ.ಗೆ ‘ಹ್ಯಾರಿ ಬ್ರೂಕ್’ ಖರೀದಿಸಿದ ಸನ್ ರೈಸರ್ಸ್ ಹೈದರಾಬಾದ್