ಹುಬ್ಬಳ್ಳಿ: ಇಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಎಂಬಾತ ಕರೆದೊಯ್ದು ಹತ್ಯೆ ಮಾಡಿದ್ದನು. ಇಂದು ಆತನನ್ನು ಬಂಧಿಸೋದಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳೋದಕ್ಕೆ ಹಲ್ಲೆಗೆ ಮುಂದಾಗಿದ್ದನು. ಈ ವೇಳೆ ಪೊಲೀಸರು ನಡೆಸಿದಂತ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಇಡೀ ರಾಜ್ಯವೇ ಮಮ್ಮಲ ಮರುಗಿದ್ದಂತ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಬಂಧಿಸೋದಕ್ಕೆ ತೆರಳಿದಂತ ವೇಳೆಯಲ್ಲಿ ಬಿಹಾರ ಮೂಲದ ಆರೋಪಿ ರಿತೇಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು.
ಪೊಲೀಸರು ಆತ್ಮ ರಕ್ಷಣೆಗಾಗಿ ನಡೆಸಿದಂತ ಗುಂಡಿನ ದಾಳಿಯಲ್ಲಿ ಆರೋಪಿ ರಿತೇಶ್ ಎದೆ ಸೀಳಿತ್ತು. ಹೀಗಾಗಿ ಸ್ಥಳದಲ್ಲೇ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಆರೋಪಿ ಬಲಿಯಾಗಿದ್ದಾನೆ.