ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ.
ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ಸಡಿಲಿಕೆ ಇತ್ತು. ಇದೀಗ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ
ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ








