ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ಸಿರಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ರಾಜ್ಯದ 90 ಸರ್ಕಾರಿ ಐಟಿಐ ಗಳಲ್ಲಿ ಡಿ.ಜಿ.ಟಿ. ನವದೆಹಲಿ ಅವರ ಪರಿಷ್ಕೃತ ಪಠ್ಯಕ್ರಮದ ಅನುಸಾರ ಅಗತ್ಯವಿರುವ ಯಂತ್ರೋಪಕರಣಗಳನ್ನು ಒದಗಿಸಲು ಈಗಾಗಲೆ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಸಿರಗುಪ್ಪದ ಸರ್ಕಾರಿ ಐಟಿಐ ಸಂಸ್ಥೆಗೂ ಕೂಡ ಹೊಸದಾಗಿ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಿ, ಒದಗಿಸಲಾಗುವುದು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ರಾಜ್ಯದಲ್ಲಿ ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್
ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!








