ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳದ ಬೆನ್ನಲ್ಲೇ ಕರ್ನಾಟಕದಲ್ಲೂ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿವೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 50 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಇಂದು ಬೆಂಗಳೂರು ನಗರದಲ್ಲಿ 40, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗದಲ್ಲಿ ತಲಾ ಒಬ್ಬರು, ಕೋಲಾರ 04, ಚಿತ್ರದುರ್ಗ 03 ಸೇರಿದಂತೆ 50 ಮಂದಿಗೆ ಕೊರೋನಾ ಸೋಂಕು ( Coronavirus ) ದೃಢಪಟ್ಟಿರೋದಾಗಿ ತಿಳಿಸಿದೆ.

ಇಂದು 40 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಬಂದ ಕಾರಣ, ಸೋಂಕಿತರ ಸಂಖ್ಯೆ 40,72,194ಗೆ ಏರಿಕೆಯಾಗಿದೆ. ಇವರಲ್ಲಿ ಇಂದು 98 ಸೇರಿದಂತೆ ಈವರೆಗೆ 40,31,625 ಮಂದಿ ಗುಣಮುಖರಾದ ಕಾರಣ, ರಾಜ್ಯದಲ್ಲಿ ಈಗ 261 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ಸಾಲಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಡ್ಯದ ಮದ್ದೂರು ಕ್ಷೇತ್ರದ ಪ್ರತಿ ಮನೆಗೆ ಸಂಕ್ರಾಂತಿ ಗಿಫ್ಟ್: ಸೀರೆ, ಬಾಗೀನ ವಿತರಣೆಗೆ ಕದಲೂರು ಉದಯ್ ಚಾಲನೆ

ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಬಹಿರಂಗ ಪತ್ರ: ಆರೋಪಿ ಚೈನ್ನೈನಲ್ಲಿ ಬಂಧನ

Share.
Exit mobile version