ಅಸ್ಸಾಂ: ಆರೋಗ್ಯ ಇಲಾಖೆ ಕಾರ್ಯಕರ್ತರು ನೀಡಿದ ಐರನ್ ಫೋಲಿಕ್ ಆಸಿಡ್ (iron folic acid- IFA) ಮಾತ್ರೆಗಳನ್ನು ಸೇವಿಸಿದ ಎರಡು ಶಾಲೆಗಳ ಒಟ್ಟು 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಸ್ಸಾಂನ ಚರೈಡಿಯೊ ಜಿಲ್ಲೆಯಲ್ಲಿ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸೋನಾರಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ.
ಪತ್ಸಾಕು ಬ್ಲಾಕ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಟೌ ಉಪ ಕೇಂದ್ರದ ಆರೋಗ್ಯ ಕಾರ್ಯಕರ್ತರ ತಂಡವು ಖೇರಾನಿಪಥರ್ ಕಿರಿಯ ಪ್ರಾಥಮಿಕ ಶಾಲೆಯ 75 ವಿದ್ಯಾರ್ಥಿಗಳಿಗೆ ಮತ್ತು ನಿಮಾಲಿಯಾ ಕಿರಿಯ ಪ್ರಾಥಮಿಕ ಶಾಲೆಯ 26 ವಿದ್ಯಾರ್ಥಿಗಳಿಗೆ ಐಎಫ್ಎ ನೀಡಲಾಗಿತ್ತು. ಶಿಕ್ಷಕರ ಸಮ್ಮುಖದಲ್ಲಿ ಮಾತ್ರೆಗಳನ್ನು ವಿತರಿಸಲಾಗಿದ್ದು, ಖಾಲಿ ಹೊಟ್ಟೆಯಲ್ಲಿ ಸೇವಿಸದಂತೆ ಮಕ್ಕಳಿಗೆ ಸೂಚಿಸಲಾಗಿದೆ. ಆದ್ರೆ, ಸ್ವಲ್ಪ ಹೊತ್ತಿನ ನಂತರ ಪ್ರತಿ ಶಾಲೆಯಿಂದ ಇಬ್ಬರು ಮಕ್ಕಳಿಗೆ ವಾಂತಿಭೇದಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ನಂತರ, ಇನ್ನೂ 48 ಮಕ್ಕಳನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿರತು ಎಂದು ಮೂಲಗಳು ತಿಳಿಸಿವೆ.
ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಐಎಫ್ಎ ಮಾತ್ರೆಗಳನ್ನು ಸರ್ಕಾರವು ಐರನ್-ಫೋಲಿಕ್ ಆಸಿಡ್ ಪೂರಕವಾಗಿ ಮಕ್ಕಳಿಗೆ ನೀಡಲಾಗುತ್ತದೆ.
ಗ್ರಾಹಕರೇ ಗಮನಿಸಿ: ಡಿಸೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು | New Rule From December 1st
BREAKING: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರ ಸಾವು