ಮಂಡ್ಯ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವ್ಯಾಪಕ ಮಳೆ ಹಿನ್ನಲೆಯನ್ನು ಕೆ ಆರ್ ಎಸ್ ಡ್ಯಾಂಮಿಗೆ ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಹೀಗಾಗಿ ಕೆ ಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ.
ಕಾವೇರಿ ನದಿ ಜಲನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25,000ರಿಂದ 50,000 ಕ್ಯೂಸೆಕ್ಸ್ ಗೂ ಅಧಿಕ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.
ಈ ಪ್ರಮಾಣವು ಹೆಚ್ಚಾಗಬಹುದು. ಆದುದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವಂತ ಸಾರ್ವಜನಿಕರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು, ಸುರಕ್ಷಿತ ಸ್ಥಳಗಿಗೆ ಹೋಗಲು ಸೂಚಿಸಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ಮತಗಳ್ಳತನದ ಆರೋಪ ಭಾರತೀಯ ಸಂವಿಧಾನಕ್ಕೆ ಮಾಡಿದ ಅವಮಾನ: ವಿಪಕ್ಷಗಳಿಗೆ ಸಿಇಸಿ ತಿರುಗೇಟು
ಪರಿಷ್ಕೃತ ಜಿಎಸ್ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza