ಬೆಂಗಳೂರು: ಅಕ್ಟೋಬರ್.3ರಿಂದ 12ರವರೆಗೆ ನಡೆಯಲಿರುವಂತ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 508 ಕಲಾ ತಂಡಗಳು, 6,500 ಕಲಾವಿದರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ವೇದಿಕೆ ಸಿದ್ಧಗೊಂಡಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು.
ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು.
ದಸರಾ ವೇಳೆ ಏರ್ ಶೋ ವಿಚಾರವಾಗಿ ಮಾತನಾಡಿದಂತ ಅವರು, ಈ ಬಾರಿ ಏರ್ ಶೋ ಅನುಮಾನವಿದೆ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಏರ್ ಶೋ ಇರೋದಿಲ್ಲ. ಇತರೆ ಕಾರ್ಯಕ್ರಮಗಳು ನಡೆಯುತ್ತವೆ ಎಂದರು.
ಸೆಪ್ಟೆಂಬರ್ 26ರಿಂದಲೇ ದಸರಾ ಗೋಲ್ಡ್ ಪಾಸ್ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಈಗಲೂ ಕೂಡ ಆನ್ ಲೈನ್ ನಲ್ಲಿ ಗೋಲ್ಡ್ ಪಾಸ್ ಮಾರಾಟಕ್ಕೆ ಇದೆ. ಪರಿಸ್ಥಿತಿ ನೋಡಿ ದಸರಾ ಗೋಲ್ಡ್ ಪಾಸ್ ವಿತರಣೆ ಮಾಡಲಾಗುತ್ತದೆ. ಸಮಸ್ಯೆ ಬಾರದ ಹಾಗೆ ಗೋಲ್ಡ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದರು.
ಯುವದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಖ್ಯಾತ ಸಂಗೀತ ನಿರ್ದೇಶಕರು ಭಾಗಿಯಾಗುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ, ಲಾ ಅಂಡ್ ಆರ್ಡರ್ ಗೆ ತೊಂದರೆಯಾಗಬಹುದು. ಹಾಗಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಮಹದೇವಪ್ಪ ಮಾಹಿತಿ ನೀಡಿದರು.
ಹಳೆಯ ಪರ್ಮಿಟ್, ಹೊಸ ದಂಧೆ, ಮರಳು ಮಾಫಿಯಾಕ್ಕೆ ಅಧಿಕಾರಿಗಳೇ ಸಾಥ್?: ‘CS’ಗೆ ದೂರು
BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು