Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಜೂನ್ 1ರಿಂದ ಈವರೆಗೆ ಮಳೆ ಹಾನಿಯಿಂದ 52 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ
KARNATAKA

ರಾಜ್ಯದಲ್ಲಿ ಜೂನ್ 1ರಿಂದ ಈವರೆಗೆ ಮಳೆ ಹಾನಿಯಿಂದ 52 ಮಂದಿ ಸಾವು : CM ಸಿದ್ದರಾಮಯ್ಯ ಮಾಹಿತಿ

By kannadanewsnow5701/10/2025 6:27 AM

ಕಲಬುರಗಿ : ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳ ಜೊತೆ ಚರ್ಚಿಸಿ, ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ ಎಂದರು.

547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ. ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75) ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ಶೇ.20ರಿಂದ 50ರಷ್ಟು ಹಾನಿಯಾದ ಮನೆಗಳ ಸಂಖ್ಯೆ 3,166. ಶೇ.15ರಿಂದ 20ರಷ್ಟು ಹಾನಿಯಾಗಿದ್ದ 3,881 ಮನೆಗಳಿಗೆ 6,500 ರೂ. ಪ್ರಕಾರ ಪರಿಹಾರ ನೀಡಲಾಗಿದೆ, ಒಟ್ಟಾರೆ ಇದುವರೆಗೆ 23.12 ಕೋಟಿ ರೂ.ಗಳನ್ನು ಪರಿಹಾರವಾಗಿ ಮನೆಗಳನ್ನು ಕಳೆದುಕೊಂಡವರಿಗೆ ನೀಡಲಾಗಿದೆ. ಬಟ್ಟೆ ಮತ್ತು ಗೃಹ ಬಳಕೆ ವಸ್ತುಗಳನ್ನು ಕಳೆದುಕೊಂಡ 4,858 ಕುಟುಂಬಗಳಿಗೆ ಈ ವರೆಗೆ 2.42 ಕೋಟಿ ರೂ.ಗಳ ಪರಿಹಾರ ನೀಡಲಾಗಿದೆ ಎಂದರು.

ರಸ್ತೆ, ಸೇತುವೆ ಮುಂತಾದವುಗಳ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರತಿ ಕ್ಷೇತ್ರಕ್ಕೆ ವಿಶೇಷ ಅನುದಾನದ ರೂಪದಲ್ಲಿ 25 ರಿಂದ 50 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ.

* ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27,… pic.twitter.com/TX5ajE1ggM

— Siddaramaiah (@siddaramaiah) September 30, 2025

52 people have died in the state due to rain damage since June 1: CM Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM2 Mins Read

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM1 Min Read

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM1 Min Read
Recent News

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

09/04/2026 11:18 AM

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM

BREAKING : ಬಳ್ಳಾರಿಯಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಭಾರಿ ಅನಾಹುತ!

09/04/2026 10:55 AM
State News
KARNATAKA

ರಾಜ್ಯದ ಹಿರಿಯ ನಾಗರಿಕರೇ : `ಸೀನಿಯರ್ ಸಿಟಿಜನ್ ಕಾರ್ಡ್’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow5709/04/2026 11:18 AM KARNATAKA 2 Mins Read

ಬೆಂಗಳೂರು: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ನೆಮ್ಮದಿಯ ಮತ್ತು ಗೌರವಯುತ ಜೀವನ ನಡೆಸಲು ಸರ್ಕಾರ ‘ಸೀನಿಯರ್ ಸಿಟಿಜನ್ ಕಾರ್ಡ್’…

BIG NEWS : ದಾವಣಗೆರೆ ಉಪಚುನಾವಣೆ : ನೀತಿ ಸಂಹಿತೆ ಉಲ್ಲಂಘಿಸಿ, ಬಿಜೆಪಿ ಮುಖಂಡರಿಂದ ಪಲಾವ್ ಹಂಚಿಕೆ!

09/04/2026 11:14 AM

BREAKING : ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್!

09/04/2026 11:09 AM

BREAKING : ಬಳ್ಳಾರಿಯಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಭಾರಿ ಅನಾಹುತ!

09/04/2026 10:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.