Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ
KARNATAKA

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯ ಎನ್ನುವ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.b

ಇಷ್ಟು ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು.

ಕೇವಲ ಹತ್ತು ನಿಮಿಷಗಳ ಕಾಲ ಮಳೆ ಬಂದರೆ ಇಲ್ಲಿ ನೋಡಿದರೂ ನೀರು ನಿಲ್ಲುತ್ತದೆ. ಈ ಸಮಾವೇಶಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡಿದೆ. ಜನರನ್ನೂ ಸರಕಾರವೇ ಕರೆತರಬೇಕು. ಅದಕ್ಕೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಕರೆದುಕೊಂಡು ಬರುವುದಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಕಾಂಗ್ರೆಸ್ ನವರ ಕಾರ್ಯಕ್ರಮಗಳಿಗೆ ಜನ ಬರಬೇಕಲ್ಲ, ಅದಕ್ಕಾಗಿ ಅಧಿಕಾರಿಗಳನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಸರಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಸಚಿವ ಕುಮಾರಸ್ವಾಮಿ ಅವರು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದರು.

ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಸಾರಿ ಹೇಳುತ್ತಿವೆ ಎಂದು ಸಚಿವರು ಅಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಸಿದ್ದ:

ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚೆಗೆ ಪಂಥಾಹ್ವಾನ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿಯ ಸವಾಲನ್ನು ಸ್ವೀಕರಿಸಿದ ಕೇಂದ್ರ ಸಚಿವರು, ಚರ್ಚೆ ಮಾಡಲು ತಯಾರ್ ಇದ್ದೇನೆ. ಎಲ್ಲಿಗೆ ಬೇಕಾದರೂ ಬರಲಿ. ಬಿಡದಿಯಲ್ಲಿ ಮೂರೂವರೆ ಸಾವಿರ ಜನ ತಕರಾರು ತೆಗೆದು ಅರ್ಜಿ ಕೊಟ್ಟಿದ್ದಾರೆ. ರೈತರನ್ನು ರೌಡಿಗಳು ಮತ್ತು ಪೊಲೀಸರ ಮೂಲಕ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಯೋಜನೆಯಿಂದ ಒಳ್ಳೆಯದು ಆಗುವುದಿದ್ದರೆ ರೈತರೆ ಸಂತೋಷವಾಗಿ ಭೂಮಿ ಕೊಡುತ್ತಿದ್ದರು. ಆದರೆ ಇಲ್ಲಿ ಭೂಮಿ ಕೊಡಲು ರೈತರು ಬಯಸುತ್ತಿಲ್ಲ. ಹೀಗಾಗಿ ರೈತರ ಹಿತಕ್ಕೆ ತಕ್ಕಂತೆ ಸರ್ಕಾರ ವರ್ತಿಸಬೇಕು ಎಂದು ಸಚಿವರು ಹೇಳಿದರು

ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ ಸೇರುತ್ತಾರೆ:

ಎರಡು ಬಾರಿ ಶಾಸಕರಾಗಿ ಗೆದ್ದಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ್ದಾಗಿ ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಇದೊಂದು ಗೌರವಪೂರ್ವಕ ಭೇಟಿ ಎಂದ ಅವರು, ಜೆಡಿಎಸ್ ಪಕ್ಷ ಸೇರಲು ಅವರು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ದಿನಾಂಕ ನಿಗದಿ ಮಾಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷದ ಬಲವರ್ಧನೆಗೆ ನಾವು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ. ಈಗಿನ ತಲೆ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದೇವೆ. ಅದರ ಭಾಗವಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ಕಚೇರಿಗೆ ಆಗಮಿಸುವುದಕ್ಕೂ ಮುನ್ನ ಸಚಿವರು ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿದ್ದರು. ಸುಮಾರು ಒಂದು ತಾಸಿನ ಈ ಭೇಟಿ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಮ್. ರಮೇಶ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಅನೇಕ ಮುಖಂಡರು ಸಚಿವರ ಜೊತೆಯಲ್ಲಿ ಇದ್ದರು.

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

Share. Facebook Twitter LinkedIn WhatsApp Email

Related Posts

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

5 Mins Read

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

2 Mins Read

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

1 Min Read
Recent News

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

State News
KARNATAKA

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ KARNATAKA 5 Mins Read

ತುಮಕೂರು : “2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು…

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.