ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಉತ್ತರಿಸಿದ್ದಾರೆ.
ಕಳೆದ ಐದು ವರ್ಷಗಳಿಂದಲೂ ಪಿಎಸ್ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣವನ್ನು ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗಾಗಿಯೂ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು.
ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಕಳೆದ ಐದು ವರ್ಷಗಳಿಂದಲೂ ಪಿಎಸ್ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ನಡೆದಂತಹ… pic.twitter.com/dh9C9n2bYY
— DIPR Karnataka (@KarnatakaVarthe) December 9, 2025








