ಕಲಬುರ್ಗಿ: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿರುವಂತ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ( PSI Recruitment Scam ) ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನೂ ಅನೇಕರು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದು, ಅವರ ಶೋಧಕಾರ್ಯವನ್ನು ಸಿಐಡಿ ನಡೆಸುತ್ತಿದೆ. ಈ ಬೆನ್ನಲ್ಲೇ ಇಂದು ಮತ್ತೆ ಆರು ಪ್ರತ್ಯೇಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಿಐಡಿ ( CID ) ಸಲ್ಲಿಸಿದೆ.
ಕಲಬುರ್ಗಿಯ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಹಾಗೂ ಅಶೋಕ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಇಂದು ಸಿಐಡಿಯಿಂದ ಮತ್ತೆ ಆರು ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ. ಕಲಬುರ್ಗಿಯ 3ನೇ ಜೆಎಂಎಫ್ ಸಿ ಕೋರ್ಟ್ ಗೆ ಸಿಐಡಿ ಆರು ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.
ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ : ಸಚಿವ ಆರ್.ಅಶೋಕ್
ಅಂದಹಾಗೇ ಕಲಬುರ್ಗಿ ವಿವಿ ಪೊಲೀಸ್ ಠಾಣೆ ಹಾಗೂ ಅಶೋಕ್ ನಗರ ಠಾಣೆಯಲ್ಲಿ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ದಾಖಲಾಗಿರುವಂತ ಪ್ರಕರಣದಲ್ಲಿ ಇನ್ನೂ ಅನೇಕರು ತಲೆ ಮರೆಸಿಕೊಂಡಿದ್ದಾರೆ. ಉಳಿದ ಆರೋಪಿಗಳಇಗಾಗಿ ಸಿಐಡಿಯಿಂದ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಇಂದು ಮತ್ತೆ ಆರು ಪ್ರತ್ಯೇಕ ಚಾರ್ಜ್ ಶೀಟ್ ಅನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ.