ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ.
ಪಿಎಸ್ಐ ಮರು ಪರೀಕ್ಷೆ ವೇಳಾಪಟ್ಟಿ
ದಿನಾಂಕ | ಸಮಯ | ವಿಷಯ |
ಅಂಕಗಳು |
23-01-2024 (ಮಂಗಳವಾರ) | ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12-00 ರವರೆಗೆ | ಪೇಪರ್-1 | 50 ಅಂಕಗಳು |
23-01-2024 (ಮಂಗಳವಾರ) | ಮಧ್ಯಾಹ್ನ 01-00 ರಿಂದ 02-30 ರವರೆಗೆ. | ಪೇಪರ್-2 | 150 ಅಂಕಗಳು |
ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ. ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ.
• ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.
• ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.
• ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
• ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
• ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.
ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
• ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
• ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು,ಅಂತ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.