ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಸುವರ್ಣಸೌಧದ ಬಳಿ ರೈತರು ಭಾರಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದು, ಬೆಳಗಾವಿಯ ಸುವರ್ಣಸೌಧದ ಬಳಿ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.ರೈತರ ಪ್ರತಿಭಟನೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಆಗಮಿಸಿದರು. ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಬರುವಂತೆ ರೈತರು ಪಟ್ಟುಹಿಡಿದಿದ್ದಾರೆ.
ಸುವರ್ಣಸೌಧದ ಗೇಟ್ ಮುರಿದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದು, ಅಲ್ಲಿ ಕರೆಂಟ್ ವೈರ್ ಇದ್ದರೂ ನಿರ್ಲಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ.
ಪ್ರತಿಭಟನಾ ಸ್ಥಳಕ್ಕೆ ಸಚಿವರು ಬರುವುದು ತಡವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಗೇಟ್ ಮುರಿದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ರೈತರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಾಗಾಗಿ ಕೊಂಡಸಕೊಪ್ಪ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.
BIGG NEWS : ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ ಕುರಿತು ಸಿಎಂ ಬೊಮ್ಮಾಯಿ ಹೇಳಿದ್ದೇನು..?