ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.
ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದೆ.
ಕಾಂಗ್ರೆಸ್ ಪುಢಾರಿಗಳ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತರ ಬಂಧನ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ
SHOCKING : ಚಾಮರಾಜನಗರ : ಕಾಂಪೌಂಡ್ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!