ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 5922 ವಿದ್ಯಾರ್ಥಿಗಳು RTE ಅಡಿಯಲ್ಲಿ ಪ್ರವೇಶಾವಕಾಶ ಸೌಲಭ್ಯ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ನಿಯಮ-4ರ ತಿದ್ದುಪಡಿಯಲ್ಲಿ ಉಪನಿಯಮ-7 ರನ್ವಯ ವಾರ್ಡ್‍ಗಳ ಮರು ವಿಂಗಡಣೆಯಾಗಿದ್ದು, ಆಯಾ ವಾರ್ಡ್ ಗಳಲ್ಲಿ ಸರ್ಕಾರಿ /ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ 12(1)(ಸಿ) ರನ್ವಯ ಪ್ರವೇಶಾತಿ ಅನ್ವಯಿಸುವುದಿಲ್ಲ.
ರಾಜ್ಯದಲ್ಲಿ ಕನ್ನಡ ಭಾಷೆ ಕಲಿಕಾ ಅಧಿನಿಯಮ, 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷೆ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಲಾಗಿದೆ.
ಕನ್ನಡ ಭಾಷೆ ಕಲಿಕಾ ಅಧಿನಿಯಮ-2015 ಮತ್ತು ಕನ್ನಡ ಕಲಿಕೆ ನಿಯಮಗಳು-2017ನ್ನು ಕನ್ನಡ ಸರ್ಕಾರಿ ಶಾಲೆಗಳ ಸಬಲೀಕರಣದ ಕುರಿತಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಜಿಲ್ಲಾ ಮಟ್ಟದ ಉಪ ನಿರ್ದೇಶಕರು (ಆಡಳಿತ) ಮತ್ತು ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ.
ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷೆ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾμÉಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ.
ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ.
ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು.








