ದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಅಕ್ಟೋಬರ್ 1 ರಂದು(ನಾಳೆ) ಭಾರತದಲ್ಲಿ 5G ಸೇವೆಗಳನ್ನು ಅಧಿಕೃತವಾಗಿ ಪ್ರಾರಂಭಿಸಲಿದ್ದು, ಚಾಲನೆ ನೀಡಲಿದ್ದಾರೆ.

ನಾಳೆ ಪ್ರಗತಿ ಮೈದಾನದಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್‌ (IMC)ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ದೇಶದಲ್ಲಿ 5G ಸೇವೆಗಳನ್ನು ಉದ್ಘಾಟಿಸಲಿದ್ದಾರೆ.

“ಭಾರತದ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಮೂಲಕ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ 5G ಸೇವೆಗಳನ್ನು ಹೊರತರಲಿದ್ದಾರೆ.

ಕೆಲವು ದಿನಗಳ ಹಿಂದೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಅಕ್ಟೋಬರ್ ವೇಳೆಗೆ 5G ಸೇವೆಗಳನ್ನು ಬಿಡುಗಡೆ ಮಾಡಲು ಭಾರತ ಸಜ್ಜಾಗುತ್ತಿದೆ ಎಂದು ಹೇಳಿದ್ದರು. ಬಿಡುಗಡೆಯ ನಂತರ ಸೇವೆಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು.

BIG NEWS : ಹಿರಿಯ ನಾಗರಿಕರು, ವಿದ್ಯಾರ್ಥಿಗಳ ಪ್ರಯಾಣದರ ರಿಯಾಯಿತಿ 50%-25% ಕ್ಕೆ ಕಡಿತಗೊಳಿಸಿದ ʻಏರ್ ಇಂಡಿಯಾʼ!

ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ದಸರಾ ಪ್ರಯುಕ್ತ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ

BIG NEWS : ʻನಾನು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಿಲ್ಲʼ: ಸೋನಿಯಾ ಗಾಂಧಿಗೆ ಕ್ಷಮಾಪಣಪತ್ರ ನೀಡಿದ ಅಶೋಕ್ ಗೆಹ್ಲೋಟ್

Share.
Exit mobile version