ಬೆಂಗಳೂರು : ಫೆ.26 ರಂದು ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಆದರೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆಯಲು ‘ಕುದುರೆ ವ್ಯಾಪಾರ’ಕ್ಕಿಳಿದಿದ್ದಾರೆ ಎಂಬ ಆರೋಪದ ಮೇರೆಗೆ ವಿರೋಧ ಪಕ್ಷಗಳ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗಿರುವ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಇವರಿಗೆ ‘ಪ್ರೋತ್ಸಾಹ ಧನ’ವಿಲ್ಲ
ಈ ಸಂಬಂಧ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿ ಕುಮಾರ್ ದೂರು ನೀಡಿದ್ದು, ಅದರನ್ವಯ ಮೈತ್ರಿ ಹುರಿಯಾಳು ಕುಪೇಂದ್ರ ರೆಡ್ಡಿ, ಪಕ್ಷೇತರ ಶಾಸಕಿಯೊಬ್ಬರ ಭಾವ ಡಾ.ಮಹಾಂತೇಶ್, 37 ಕ್ರೆಸೆಂಟ್ ಹೋಟೆಲ್ ಮಾಲಿಕ ರವಿ ಹಾಗೂ ಹರಿಹರದ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಮೇಲೆ ಐಪಿಸಿ 506 ಹಾಗೂ ಐಪಿಸಿ 171 ಸೇರಿದಂತೆ ಇತರೆ ಪರಿಚ್ಛೇದಗಳಡಿ ಎಫ್‌ಐಆರ್ ದಾಖಲಿಸಿ ಕೈಗೆತ್ತಿಕೊಂಡಿದ್ದಾರೆ.
ಶೀಘ್ರದಲ್ಲಿ 28 ಪಶುವೈದ್ಯಕೀಯ ಕೇಂದ್ರಗಳನ್ನು ಪುನಃ ಆರಂಭಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಪೊಲೀಸರು ತನಿಖೆ ಎರಡು ದಿನಗಳ ಹಿಂದೆ ರಾಜ್ಯ ಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ಭೇಟಿಯಾಗಿ ಶಾಸಕ ರವಿ ಗಣಿಗ ನೇತೃತ್ವದ ಕಾಂಗ್ರೆಸ್ ಶಾಸಕರ ನಿಯೋಗವು ದೂರು ನೀಡಿತ್ತು. ಈ ದೂರಿನ ಸಂಬಂಧ ಮುಂದಿನ ಕಾನೂನು ಕ್ರಮಕ್ಕೆ ವಿಧಾನಸೌಧ ಠಾಣೆಗೆ ಆಯುಕ್ತರು ವರ್ಗಾಯಿಸಿದ್ದರು.
ಉದ್ಯೋವಾರ್ತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ನಾಲ್ಕು ಸ್ಥಾನಗಳ ಪೈಕಿ ಶಾಸಕರ ಸಂಖ್ಯಾಬಲದ ಆಧಾರದ ಮೇರೆಗೆ ಮೂರು ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಒಂದು ಸ್ಥಾನದಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲುವು ಸಾಧಿಸಬಹುದು. ಚುನಾವಣಾ ಅಖಾಡಕ್ಕೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಪ್ರವೇಶಿಸಿದ್ದಾರೆ.ಆದರೆ ಈ ಅಭ್ಯರ್ಥಿಗೆ ಗೆಲುವಿಗೆ ಮತಗಳ ಕೊರತೆ ಇದೆ.
ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿ ಸೆಳೆಯಲು ಕುಪೇಂದ್ರರೆಡ್ಡಿ ಯತ್ನಿಸಿದ್ದಾರೆ. ಇನ್ನು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಸಹ ಷಡ್ಯಂತ್ರ ರೂಪಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ ಮೂಲಕ ಶಾಸಕರಿಗೆ ಬೆದರಿಕೆ ಹಾಕಲಾಗುತ್ತದೆ ಎಂದು ದೂರಿನಲ್ಲಿ ರವಿ ಗಣಿಗ ಆರೋಪಿಸಿದ್ದಾರೆ.