ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆರು ಜನರಿಗೆ ಮಂಗನ ಕಾಯಿಲೆ ಸೋಂಕು ದೃಢವಾಗಿದೆ. ತಕ್ಷಣ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ವೇಳೆ ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ರಾಜೇಶ್ ಸುರಗಿಹಳ್ಳಿ ಭೇಟಿ ನೀಡಿದ್ದಾರೆ.ಸೋಂಕಿತರ ಆರೋಗ್ಯವನ್ನು ಜಿಲ್ಲಾ ಆರೋಗ್ಯ ಅಧಿಕಾರಿ ರಾಜೇಶ್ ವಿಚಾರಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ ಇವರಿಗೆ 32 ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಂಗನಬಾವು ಕಾಯಿಲೆ ತೀವ್ರವಾಗಿ ಕಾಣಿಸಿಕೊಂಡಿದೆ ಅಲ್ಲದೆ ಇತ್ತೀಚೆಗೆ ವೃದ್ಧರೊಬ್ಬರು ಮಗನ ಕಾಯಿಲೆಗೆ ಮಾರ್ಪಟ್ಟಿದ್ದರು. ಕಳೆದ ಎರಡು ದಿನಗಳ ಹಿಂದೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರಕಾರಿ ಶಾಲೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಮಕ್ಕಳಲ್ಲೂ ಮಂಗನ ಕಾಯಿಲೆ ರೋಗದ ಲಕ್ಷಣ ಕಂಡುಬಂದಿತ್ತು.