ಅರಾವಳಿ(ಗುಜರಾತ್): ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಕಾರೊಂದು ಹರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಅರಾವಳಿ ಜಿಲ್ಲೆಯ ಮಾಲ್ಪುರ್ ಎಂಬಲ್ಲಿ ನಡೆದಿದೆ.
14 ಪಾದಚಾರಿಗಳು ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಇನ್ನೋವಾ ಕಾರು ಭಕ್ತರ ಮೇಲೆ ಹರಿದಿದೆ.
Gujarat | 6 dead, 7 injured after a car mowed down people, walking towards Ambaji, in Aravalli district. Injured shifted to hospital: police pic.twitter.com/MTEjwaVJ91
— ANI (@ANI) September 2, 2022
ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಮತ್ತು ಗಾಯಗೊಂಡವರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು