ಶಿವಮೊಗ್ಗ: ಜಿಲ್ಲೆಯ ಹೊಸನಗರದಲ್ಲಿ ಟಿಪ್ಪರ್ ಲಾರಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ, 6 ಜನರು ಗಂಭೀರವಾಗಿ ಗಾಯಗೊಂಡು, 6 ಜನರು ಸಣ್ಣಪುಟ್ಟ ಗಾಯವಾಗಿರೋ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿಯಲ್ಲಿ ಟಿಪ್ಪರ್ ಲಾರಿಗೆ ಓಮ್ನಿ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಓಮ್ನಿಯಲ್ಲಿ ತೆರಳುತ್ತಿದ್ದಂತ 6 ಜನರು ಗಂಭೀರವಾಗಿ ಗಾಯಗೊಂಡಿದ್ದರೇ, ಇನ್ನೂ 6 ಜನರಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ.
ಗಾಯಾಳುಗಳು ಎಲ್ಲರೂ ಹೊಸನಗರ ತಾಲೂಕಿನ ಬುಲ್ಡೋಜರ್ ಗುಡ್ಡ ಗ್ರಾಮದವರು. ಗಾಯಾಳುಗಳನ್ನು ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
ALEART: ‘ಆ್ಯಂಟಿಬಯೋಟಿಕ್’ ಮಾತ್ರೆ ಸೇವನೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!