ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿದ ಕಾರಣ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದಂತ 6 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಹೊನ್ನಾವರದಲ್ಲಿ ನಡೆದಿದೆ.
ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದಂತ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 6 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೊನ್ನಾವರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಖಾಸಗಿ ಬಸ್ ಪಲ್ಟಿಯಾಗಿ ಉಂಟಾದಂತ ಅಪಘಾತದಲ್ಲಿ ಬಸ್ಸಿನಲ್ಲಿದ್ದಂತ ಇನ್ನೂ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಾವೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ರಾಜ್ಯದಲ್ಲಿ ಮತ್ತೊಂದು ಭೀಕರ ಕಾರು ಅಪಘಾತ: ಕಂದಕಕ್ಕೆ ಉರುಳಿ ಬಿದ್ದು ಮೂವರು ದುರ್ಮರಣ