ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮುಂಬೈ ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಭಾರೀ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ಖಾನೆಯಲ್ಲಿ ಮೂರು ಸ್ಫೋಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕನಿಷ್ಠ ಎಂಟು ಜನರನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೆ ದೇವೇಗೌಡರು, ಈಗ ಪತ್ರ ಬರೆದು ಏನು ಮಾಡುತ್ತಾರೆ : ಸಿಎಂ ಸಿದ್ದರಾಮಯ್ಯ

ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ : ಸಿಎಂ ಸಿದ್ದರಾಮಯ್ಯ

Share.
Exit mobile version