ಬೆಳಗಾವಿ : ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶದಿಂದ ಯಾವುದೇ ಅನುಕೂಲ ಆಗುತ್ತಿಲ್ಲ, ಇದರಿಂದ ಲಾಭ ಆದರೂ ಏನು ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆಗೆ ಸಚಿವ ಮುರುಗೇಶ್ ನಿರಾಣಿ ಉತ್ತರ ನೀಡಿದರು. ಬಂಡವಾಳ ಹೂಡಿಕೆ ಸಮಾವೇಶದಿಂದ 6 ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನವೆಂಬರ್ನಲ್ಲಿ ನಡೆದ ಬಂಡವಾಳ ಹೂಡಿಕೆ ಸಮಾವೇಶದಲ್ಲಿ 9,81,784 ಕೋಟಿ ಹೂಡಿಕೆ ಆಗಿದೆ. ಈ ಬಾರಿಯ ಸಮಾವೇಶದಿಂದ 6 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. 75% ಬಂಡವಾಳ ಹೂಡಿಕೆ ಆಗೋಕೆ ಸರ್ಕಾರ ಕ್ರಮವಹಿಸಿದೆ ಎಂದರು.
ರೈತರಿಗೆ ಸಚಿವ ಪ್ರಭು ಚವ್ಹಾಣ್ ಗುಡ್ ನ್ಯೂಸ್
ರೈತರಿಗೆ ಸಚಿವ ಪ್ರಭು ಚವ್ಹಾಣ್ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಹೇಳಿದರು.
ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಸಚಿವರು ಹಾಲು ಉತ್ಪಾದಕರಿಗೆ 5 ರೂ. ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ. ಶೀಘ್ರವೇ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಹಾಲು ಉತ್ಪಾದಕ ರೈತರಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶೀಘ್ರವೇ 339 ಕೋಟಿ ಬಾಕಿ ಪ್ರೋತ್ಸಾಹಧನ ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
BIGG NEWS : ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲಿನ 339 ಕೋಟಿ ಬಾಕಿ ಪ್ರೋತ್ಸಾಹಧನ ಬ್ಯಾಂಕ್ ಖಾತೆಗೆ ಜಮಾ