ಉತ್ತರ ಪ್ರದೇಶ: ಉತ್ತರ ಪ್ರದೇಶದ ಫಿರೋಜಾಬಾದ್ನ ಜಸ್ರಾನಾದಲ್ಲಿ ಮಂಗಳವಾರ ಭೀಕರ ಘಟನೆ ಸಂಭವಿಸಿದೆ. ಇಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ 6 ಮಂದಿ ಸಜೀವ ದಹನವಾಗಿದ್ದಾರೆ.
ವರದಿಯ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿರುವ ಅವರ ಎಲೆಕ್ಟ್ರಾನಿಕ್ಸ್-ಕಮ್-ಫರ್ನಿಚರ್ ಅಂಗಡಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡು ಒಂದು ಕುಟುಂಬದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ನಾಲ್ಕು ಮಕ್ಕಳು ಸಹ ಸೇರಿದ್ದಾರೆ. ಈ ವೇಳೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಅಂಗಡಿ ಮಾತ್ರವಲ್ಲದೆ ಮೊದಲ ಮಹಡಿಯಲ್ಲಿರುವ ಮಾಲೀಕರ ಮನೆಯೂ ಸುಟ್ಟುಹೋಗಿದೆ ಎನ್ನಲಾಗಿದೆ.
ಘಟನೆಯ ಸುದ್ದಿ ತಿಳಿದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ 18 ವಾಹನಗಳು ಬೆಂಕಿ ನಂದಿಸಲು ಯತ್ನಿಸಿವೆ ಎಂದು ಹೇಳಲಾಗಿದೆ. ಕಟ್ಟಡದೊಳಗೆ ಇನ್ನೂ ಯಾರಾದರೂ ಸಿಲುಕಿಕೊಂಡಿದ್ದಾರೆಯೇ ಎಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಉಜ್ಜಯಿನಿಯ ʻಮಹಾಕಾಲ್ ಶಿವನ ದೇವಾಲಯʼಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ | WATCH VIDEO
BIGG NEWS : ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಮತಪಟ್ಟಿ ಪರಿಶೀಲನೆಗೆ ಮೂವರು ‘IAS’ ಅಧಿಕಾರಿಗಳ ನೇಮಕ
BIGG NEWS: ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್; ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ
ಉಜ್ಜಯಿನಿಯ ʻಮಹಾಕಾಲ್ ಶಿವನ ದೇವಾಲಯʼಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ | WATCH VIDEO