ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನ ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ವಾಹನ ಅಪಘಾತದಲ್ಲಿ 16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು.
ಮೃತರ ಕುಟುಂಬಕ್ಕೆ ಆಗಿರು ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.
BREAKING NEWS : ಬೆಳಗಾವಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
BIGG NEWS : ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೇರಿ ಇಬ್ಬರು ಅರೆಸ್ಟ್