ದೇವನಹಳ್ಳಿ: ದಿನದಿಂದ ದಿನಕ್ಕೆ ವಿದೇಶದಿಂದ ಬರುತ್ತಿರುವವರಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 16 ರಂದು 5 ಜನರಿಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿತ್ತು. ಇದರ ನಡುವೆ ಇಂದು ಲಂಡನ್, ದುಬೈನಿಂದ ಬಂದ 6 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ವೇಳೆ ೬ ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಲಂಡನ್ ಮತ್ತು ದುಬೈನಿಂದ ಇಂದು ಬೆಳಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರ ಪೈಕಿ 6 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಲಂಡನ್ ನಿಂದ ಬಂದ ಓರ್ವ ಮತ್ತು ದುಬೈನಿಂದ ಬಂದ ಐವರಿಗೆ ಸೋಂಕು ದೃಢಪಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಟೆಸ್ಟಿಂಗ್ ಮಾಡಿದ ವೇಳೆ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತರಿಗೆ ಬೋರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಸೋಂಕಿತರ ಸ್ಯಾಂಪಲ್ ಪಡೆದು ಜಿನೋಟಿಕ್ ಸೀಕ್ವೆನ್ಸ್ಗೆ ಕಳಿಸಲಾಗಿದೆ.
ಸೇನಾ ಹೆಲಿಕಾಪ್ಟರ್ ಅಪಘಾತದ ಪ್ರಕರಣ: ಸಕಲ ಗೌರವಗಳೊಂದಿಗೆ ವರುಣ್ ಸಿಂಗ್‌ನ ಅಂತ್ಯಸಂಸ್ಕಾರ