ಹಿಮಾಚಲ ಪ್ರದೇಶ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಈ ಆದೇಶವನ್ನು ಪ್ರಕಟಿಸಿದ್ದಾರೆ. ಸ್ಪೀಕರ್ ಎಲ್ಲಾ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದರು.
ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ಸಚಿವ ಹರ್ಷವರ್ಧನ್ ಚೌಹಾಣ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹಿಮಾಚಲ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡಿ ಅಡ್ಡ ಮತದಾನ ಆರೋಪ ಎದುರಿಸುತ್ತಿರುವಂತ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ.
#WATCH | Himachal Pradesh Assembly Speaker Kuldeep Singh Pathania says, "Six MLAs, who contested on Congress symbol, attracted provisions of anti-defection law against themselves…I declare that the six people cease to be members of the Himachal Pradesh Assembly with immediate… pic.twitter.com/QQt92aM10v
— ANI (@ANI) February 29, 2024