ದೆಹಲಿ: ಗಾಂಜಾ ಸೇವಿಸಿದ ಅಮಲಿನಲ್ಲಿ ಇಬ್ಬರು ಹುಡುಗರು 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ದಕ್ಷಿಣ ದಿಲ್ಲಿಯ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಭಾನುವಾರ ಮುಂಜಾನೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ ಬಾಲಕನು ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೊಬ್ಬರ ಮಗ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ ಬರೇಲಿ ಮೂಲದವರು. ಆರೋಪಿಗಳಾದ ವಿಜಯ್ ಕುಮಾರ್ ಮತ್ತು ಅಮನ್ ಕುಮಾರ್ ಇಬ್ಬರೂ ಬಿಹಾರ ಮೂಲದವರಾಗಿದ್ದು, ಿವರU ಕೂಡ ಇಲ್ಲೇ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಮಾದಕದ್ರವ್ಯದ ಅಮಲಿನಲ್ಲಿದ್ದಾಗ ಅವರು ಮಗುವಿನ ಕತ್ತು ಸೀಳಿದ್ದಾರೆ ಎಂದಿದ್ದಾರೆ.