ವಿಜಯಪುರ : ವಿಜಯಪುರದಲ್ಲಿ ಮತ್ತೆ ಬೀದಿ ನಾಯಿಗಳು ಅಟ್ಟಹಾಸ ಮೆರೆದಿವೆ. ವಿಜಯಪುರ ನಗರದ ಕೆಎಸ್ಆರ್ಟಿಸಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು ಮನೆ ಮುಂದೆ ನಿಂತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಅನ್ವಿತ ಪಡ್ಡಿ ಎನ್ನುವ ಬಾಲಕಿಯ ಮೇಲೆ ಬಿದ್ದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ.
ಮಾರಣಾಂತಿಕವಾಗಿ ಐದಾರು ಬೀದಿ ನಾಯಿಗಳು ದಾಳಿ ಮಾಡಿದ್ದು ಈ ವೇಳೆ ತಕ್ಷಣ ಬಾಲಕಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅನ್ವಿತಾ ಕಣ್ಣು, ಬೆನ್ನು ಹಾಗೂ ಕಾಲಿಗೆ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿವೆ . ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಬಾಲಕಿ ಅನ್ವಿತಾಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ ಬೀದಿ ನಾಯಿಗಳ ಕಾಟಕ್ಕೆ ನಿವಾಸಿಗಳು ಬೇಸತ್ತು ಹೋಗಿದ್ದಾರೆ.








