ಶಿವಮೊಗ್ಗ: ವಿದ್ಯುತ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತರಿಗೆ ಸಿಹಿ ಸುದ್ದಿಯೊಂದು ಬಂದಿದ್ದು, ರಾಜ್ಯದ ಹಲವೆಡೆ ಲೈನ್‌ಮನ್‌ಗಳ ಕೊರತೆ ಇದೆ. ಹಾಗಾಗಿ ಆರು ಸಾವಿರ ಲೈನ್‌ಮನ್‌ಗಳ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಈ ಬಾರಿ ಮಳೆ ಕೊರತೆಯಿಂದ ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗಿದೆ. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ನಿರ್ವಹಣೆ ಕಾರಣದಿಂದ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದರು.
ಅದೇ ಸಮಯದಲ್ಲಿ ಕಲ್ಲಿದ್ದಲು ತೀವ್ರ ದುಬಾರಿಯಾಗಿ ಸಮಸ್ಯೆ ಉಲ್ಬಣಿಸಿತ್ತು. ಉತ್ತರಪ್ರದೇಶ ಹಾಗೂ ಹಿಮಾಚಲ ಪ್ರದೇಶದಿಂದ ವಿದ್ಯುತ್ ಖರೀದಿ ಮಾಡಿದೆವು. ಕೇಂದ್ರ ಸರ್ಕಾರವೂ ವಿದ್ಯುತ್ ಒದಗಿಸಿತು. ಈಗ ವಿದ್ಯುತ್ ಸಮಸ್ಯೆಯಿಲ್ಲ. ಮುಂದೆ ತೊಂದರೆಯಾದರೆ ಎದುರಿಸಲು ಸನ್ನದ್ಧರಾಗಿದ್ದೇವೆ ಎಂದರು.
ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗಿದೆ.ಟ್ರಾನ್ಸ್‌ಫಾರ್ಮ‌್ರನಿಂದ 500 ಮೀಟರ್ ದೂರದಲ್ಲಿರುವ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಸಿಕೊಂಡರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಶೇ.80 ಸಹಾಯಧನ ಸಿಗಲಿದೆ. ಇದಕ್ಕಾಗಿ ಗುತ್ತಿಗೆದಾರರ ಪ್ಯಾನಲ್ ಸಿದ್ಧಪಡಿಸಲಾಗಿದೆ. ರೈತರು ಆನ್‌ಲೈನ್ ಮೂಲಕ ತಮಗೆ ಬೇಕಾದ ಗುತ್ತಿಗೆದಾರರನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.