ಬೆಂಗಳೂರು: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ ದಾಖಲಾಗಿವೆ. ಹಾಗಾದರೆ, ಅವರು ಎಷ್ಟು ಸಲ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಸಚಿವರು; ಸಿದ್ದರಾಮಯ್ಯ ವಿರುದ್ಧದ 61 ಕೇಸುಗಳ ಪೈಕಿ 50 ಕೇಸುಗಳ ತನಿಖೆಯೇ ಆಗಿಲ್ಲ ಎಂದು ಪತ್ರಿಕಾ ವರದಿ ಹೇಳುತ್ತದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ನಾನು ಕಪ್ಪು ಚುಕ್ಕೆ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿಎಂ ಹೇಳಿಕೊಳ್ಳುತ್ತಾರೆ. ಹಾಗಾದರೆ ಇವರು ಐದು ವರ್ಷ ಸಿಎಂ ಆಗಿದ್ದಾಗ ಲೋಕಾಯುಕ್ತವನ್ನು ಏನು ಮಾಡಿದರು? ಎಸಿಬಿಯನ್ನು ಯಾಕೆ ಹುಟ್ಟು ಹಾಕಿದರು? ಎಂದು ಖಾರವಾಗಿ ಪ್ರಶ್ನಿಸಿದರು.
ಸಿಎಂ ಮನೆಯಿಂದಲೇ ನನಗೆ ಮಾಹಿತಿ ಬರುತ್ತಿದೆ
ನಾನು ಈ ಸರಕಾರದ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಮೊದಲ ದಿನದಿಂದಲೂ ಮಾತನಾಡುತ್ತಲೇ ಇದ್ದೇನೆ. ಇದನ್ನು ಸಹಿಸಲಾಗದೆ ಸರಕಾರದಲ್ಲಿ ದೊಡ್ಡ ಮಟ್ಟದ ಒಳಸಂಚು ನಡೆಯುತ್ತಿದೆ. ನನಗೆ ಖುದ್ದು ಸಿಎಂ ಮನೆಯಿಂದಲೇ ಮಾಹಿತಿ ಬರುತ್ತಿದೆ. ಸಿಎಂ ಕಾನೂನು ತಜ್ಞರು ಏನು ಮಾಡ್ತಿದ್ದಾರೆ, ಏನೆಲ್ಲಾ ಶೋಧ ಮಾಡುತ್ತಾ ನನ್ನ ವಿರುದ್ಧ ಮಸಲತ್ತು ಮಾಡುತ್ತಿದ್ದಾರೆ ಎನ್ನುವ ವಿಷಯ ನನಗೆ ಗೊತ್ತಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
BIG NEWS: ಸಿಎಂ ಸಿದ್ಧರಾಮಯ್ಯ ಬಳಿಯೇ ‘ಮುಡಾ’ ಮೂಲ ದಾಖಲೆಗಳಿವೆ: ‘RTI ಕಾರ್ಯಕರ್ತ’ ಗಂಭೀರ ಆರೋಪ
ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿ ಈ ಸ್ಪಷ್ಟನೆ ಕೊಟ್ಟ ‘ಕೇಂದ್ರ ಸಚಿವ HDK’