ಶಿವಮೊಗ್ಗ : ರಾಜ್ಯದಲ್ಲಿ ಈ ಬಾರಿ ಸುಮಾರು 65 ಸಾವಿರ ಹೆಕ್ಟರ್ ಬೆಳೆ ಹಾನಿಯಾಗಿದ್ದು, 58 ಜನರು ಮೃತಪಟ್ಟಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಸುಮಾರು 65 ಸಾವಿರ ಹೆಕ್ಟರ್ ಬೆಳೆ ಹಾನಿಯಾಗಿದ್ದು, 58 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ ಈಗಾಗಲೇ ಪರಿಹಾರ ನೀಡಲಾಗಿದೆ. ಮಳೆ ಕಳೆದುಕೊಂಡವರಿಗೂ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಜೂನ್ ಹಾಗೂ ಜುಲೈ ನಲ್ಲಿ ಶೇ. 32 ರಷ್ಟು ಅಧಿಕ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯೂ ಆಗಿದೆ ಎಂದರು.