ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 520663 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಅಲ್ಲದೇ ಮಳೆಯ ಕಾರಣದಿಂದಾಗಿ ಏಪ್ರಿಲ್ ನಿಂದ ಇಲ್ಲಿಯವರೆಗೆ 111 ಮಂದಿ ಸಾವನ್ನಪ್ಪಿರುವುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಡೆಸಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು ಎಂದರು.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದರು.
ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ ಎಂದರು.
651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದರು.
ಹೀಗಿದೆ ಇಂದಿನ ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ನಡೆಸಿದ ಸಭೆಯ ಪ್ರಮುಖ ಹೈಲೈಟ್ಸ್
BREAKING : ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ನಿಷೇಧ ವಿರೋಧಿಸಿ ಬೃಹತ್ ಪ್ರತಿಭಟನೆ ; ಒರ್ವ ಸಾವು, 80 ಜನರಿಗೆ ಗಾಯ