ಪಶ್ಚಿಮ ಬಂಗಾಳ : ಅಕ್ರಮವಾಗಿ ಬಾರ್ನಲ್ಲಿ ಆಲ್ಕೋಹಾಲ್ ಸೇವಿಸಿ, 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳದ ಹೌರಾದಲ್ಲಿ ಕಳ್ಳಭಟ್ಟಿ (country liquor) ಸೇವಿಸಿ 7 ಮಂದಿ ಮೃತಪಟ್ಟಿರುವ ಘಟನೆ ಇಂದು (ಬುಧವಾರ) ಬೆಳಗ್ಗೆ ನಡೆದಿದೆ. ಈ ದುರಂತದಲ್ಲಿ 20 ಜನರು ಅಸ್ವಸ್ಥರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಮಂಗಳವಾರ ರಾತ್ರಿ ಅಕ್ರಮ ಬಾರ್ನಲ್ಲಿ ಇವರೆಲ್ಲರೂ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದಾದ ಬಳಿಕ ಅನೇಕರು ಅಸ್ವಸ್ಥಗೊಂಡಿದ್ದರು. ಇಂದು ಬೆಳಿಗ್ಗೆ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣವನ್ನು ಕಂಡುಹಿಡಿಯಬಹುದು ಎಂದು ಹೌರಾ ಪೊಲೀಸ್ ಆಯುಕ್ತ ಪ್ರವೀಣ್ ಕುಮಾರ್ ತ್ರಿಪಾಠಿ ಹೇಳಿದ್ದಾರೆ.
WB | 7 people dead, several others ill allegedly after consuming country liquor in Howrah
7 people have died, 6 people under medical treatment in a hospital; Cause of death can be ascertained after post-mortem, says Howrah Police Commissioner Praveen Kumar Tripathi pic.twitter.com/R9ty65k3EC
— ANI (@ANI) July 20, 2022