ಮಂಗಳೂರು: ಇಂದು ಜಿಲ್ಲೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ನಿರ್ಮಾಣ ಹಂತದ ಸೇತುವೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿರೋ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಏಕಾಏಕಿ ಕುಸಿತಗೊಂಡಿದೆ. ಇದರಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿ 7 ಕಾರ್ಮಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಮಲ್ಲಿಪ್ಪಾಡಿ ಸಮೀಪದಲ್ಲಿನ ನಿರ್ಮಾಣ ಹಂತದ ಸಂಪರ್ಕ ಕಲ್ಲಿಸೋ ಸೇತುವೆ ಇದಾಗಿದೆ. ಬರೆಂಜ ಹಾಗೂ ಕುರುಡಕಟ್ಟೆ ನಡುವೆ ಸಂಪರ್ಕ ಕಲ್ಪಿಸೋ ನಿಟ್ಟಿನಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿತ್ತು.
ಇಂದು ದಿಢೀರ್ ಕುಸಿತಗೊಂಡ ಪರಿಣಾಮ, 7 ಕಾರ್ಮಿಕರು ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ
BREAKING : ನ್ಯಾಯಾಂಗ ದುರ್ಬಲಗೊಳಿಸುವ ಪ್ರಯತ್ನ ಖಂಡಿಸಿ 21 ನಿವೃತ್ತ ನ್ಯಾಯಾಧೀಶರಿಂದ ‘CJI’ಗೆ ಪತ್ರ