ನವದೆಹಲಿ: ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಪ್ರಯಾಗ್ ರಾಜ್ ನಿಂದ ಹಿಂದಿರುಗುತ್ತಿದ್ದ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮಧ್ಯಪ್ರದೇಶದ ಜಬಲ್ಪುರದ ಸಿಹೋರಾ ಬಳಿ ಭೀಕರ ಅಪಘಾತಕ್ಕೀಡಾಗಿದೆ.
ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಯಾತ್ರಿಕರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ನಂತರ ಜಬಲ್ಪುರ ಕಲೆಕ್ಟರ್ ಮತ್ತು ಎಸ್ಪಿ ಸ್ಥಳಕ್ಕೆ ಧಾವಿಸಿದರು. ಬೆಳಿಗ್ಗೆ 9:15 ರ ಸುಮಾರಿಗೆ ಎನ್ಎಚ್ -30 ರಲ್ಲಿ ಈ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.