ಭಟ್ಕಳ: ಇಲ್ಲಿನ ಮುರುಡೇಶ್ವರಕ್ಕೆ ಶಾಲಾ ಪ್ರವಾಸಕ್ಕೆ ತೆರಳಿದ್ದಂತ 7 ವಿದ್ಯಾರ್ಥಿನಿಯರು ಅರಬ್ಬಿ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದರೇ, ಮೂವರನ್ನು ರಕ್ಷಿಸಲಾಗಿದ್ದರೇ, ಮತ್ತೆ ಮೂವರು ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದೆ.
ಮಂಗಳವಾರದಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮುರಾರ್ಜಿ ದೇಸಾಯಿ ಶಾಲೆಯ ಶಾಲಾ ವಿದ್ಯಾರ್ಥಿನಿಯರನ್ನು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದೊಯ್ಯಲಾಗಿತ್ತು. ಇಲ್ಲಿನ ಸಮುದ್ರದಲ್ಲಿ ಆಟವಾಡುತ್ತಿದ್ದಂತ ಸಂದರ್ಭದಲ್ಲಿ ಅಲೆಗಳ ಹೊಡೆತದಿಂದ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಲೈಫ್ ಗಾರ್ಡ್ ಸಿಬ್ಬಂದಿ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೇ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಶ್ರವಂತಿ ಗೋಪಾಲಪ್ಪ(15) ಎಂದು ಗುರುತಿಸಲಾಗಿದೆ. ಉಳಿದ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ ಹಾಗೂ ಲಿಪಿಕಾ ಎಂಬುವರನ್ನು ರಕ್ಷಇಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದಂತ ದೀಕ್ಷಿತಾ, ಲಾವಣ್ಯ ಹಾಗೂ ಮತ್ತೊಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆಯನ್ನು ಇಂದು ಮುಂದುವರೆಸಲಾಗುತ್ತದೆ ಎನ್ನಲಾಗುತ್ತಿದೆ.
ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KPSCಯಿಂದ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KPSC Exams