ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ತರಬೇತಿ ನೀಡಲು ರಾಜ್ಯದಲ್ಲಿ 7 ಕಡೆಯಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳು ಸ್ಥಾಪನೆಯಾಗಲಿದ್ದಾವೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ.
ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ.… pic.twitter.com/yvMpWAY07c
— DIPR Karnataka (@KarnatakaVarthe) February 25, 2025
IMA ಪ್ರಕರಣದ ಸಂತ್ರಸ್ತರಿಗೆ ‘ರಂಜಾನ್’ಗೂ ಮುನ್ನ ಪರಿಹಾರ: ಸಚಿವ ಕೃಷ್ಣಬೈರೇಗೌಡ ಘೋಷಣೆ