ಮಧುಗಿರಿ : ಮೆದುಳು ಜ್ವರಕ್ಕೆ ಲಸಿಕೆ ಪಡೆದ ಏಳು ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ಎಂಜಿಎಂ ಶಾಲೆಯ ವಿದ್ಯಾರ್ಥಿಗಳಿಗೆ ಜೆ.ಇ ಲಸಿಕೆ ಅಭಿಯಾನದಲ್ಲಿ ಲಸಿಕೆ ಕೊಡಿಸಲಾಗಿದ್ದು, ಪರಿಣಾಮ ಮಕ್ಕಳಲ್ಲಿ ವಾಂತಿ, ತಲೆಸುತ್ತು ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಸದ್ಯ, ಮಕ್ಕಳು ಅಪಾಯದಿಂದ ಪಾರಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ರಮೇಶ್ ಬಾಬು ತಿಳಿಸಿದ್ದಾರೆ.
BREAKING NEWS : ಅಕ್ರಮ ನಾಡಪಿಸ್ತೂಲ್ ಪ್ರಕರಣ : ‘ರಾಜು ಕಪನೂರ್’ 2 ದಿನ ಪೊಲೀಸ್ ಕಸ್ಟಡಿಗೆ